ಶಿವಮೊಗ್ಗ, ಮಾ 21 (DaijiworldNews/HR): ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿರುವ ಘಟನೆ ನಡೆದಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರುಪೊಲೀಸರ ಪ್ರತಿರೋಧದ ನಡುವೆಯೂ ಗೋಮೂತ್ರ ಸಿಂಪಡಣೆ ಮಾಡಲಾಗಿದ್ದು, ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ತು ಮತ್ತು ಬಜರಂಗದಳದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಈ ವೇಳೆ ಕಾರ್ಯಕರ್ತರು ಆಜಾನ್ ಕೂಗಿದ್ದ ಸ್ಥಳದಲ್ಲಿ ಗೋಮೂತ್ರ ಸಿಂಪಡಿಸಿದ್ದಾರೆ.