ವಿಜಯಪುರ, ಮಾ 21 (DaijiworldNews/HR): ರಾಜ್ಯ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸುತ್ತಿರುವ ಗ್ಯಾರಂಟಿಗಳಿಗೆ ಬೆಲೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸುತ್ತಿರುವ ಗ್ಯಾರಂಟಿಗಳಿಗೆ ಬೆಲೆ ಇಲ್ಲ. ಯಾವ್ಯಾವ ರಾಜ್ಯದಲ್ಲಿ ಏನೇನು ಘೋಷಿಸಿದ್ದಾರೆ, ಏನೇನು ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ಕಾಂಗ್ರೆಸ್ ಇನ್ನೂ ಎಷ್ಟು ಗ್ಯಾರಂಟಿ ಘೋಷಣೆಗಳನ್ನಾದರೂ ಮಾಡಲಿ ಎಂದರು.
ಇನ್ನು ಉರಿಗೌಡ- ನಂಜೆಗೌಡ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಈ ವಿಷಯದಲ್ಲಿ ನಿರ್ಮಲಾನಂದ ಶ್ರೀಗಳು ಸಚಿವ ಮುನಿರತ್ನ ಅವರೊಂದಿಗೆ ಚರ್ಚಿಸಿದ್ದಾರೆ. ಶ್ರೀಗಳು ಹೇಳಿದ್ದನ್ನೇ ಎಲ್ಲರೂ ಒಪ್ಪಿದ್ದೇವೆ ಎಂದಿದ್ದಾರೆ.
ಉರಿಗೌಡ, ನಂಜೇಗೌಡ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ.