ದೇವನಹಳ್ಳಿ, ಮಾ 21 (DaijiworldNews/MS): ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮಾಜಿ ಶಾಸಕ ವೆಂಕಟಸ್ವಾಮಿಯವರಿಗೆ ಇಂದು ಮುಂಜಾನೆ ಹೃದಯಾಘಾತವಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸದ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡ್ತಿದ್ದ ವೆಂಕಟಸ್ವಾಮಿ ನಿನ್ನೆ ರಾತ್ರಿ ಪ್ರಚಾರ ಮುಗಿಸಿ ಮನೆಗೆ ಬಂದಿದ್ದಾಗ ಹೃದಯಾಘಾತವಾಗಿದೆ.
2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದು, ನಂತರದ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಬಾರಿ ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಅವರು ಈಗಾಗಲೇ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ನಿನ್ನೆಯೂ ಕ್ಷೇತ್ರದ ಗ್ರಾಮಗಳಲ್ಲಿ ಪ್ರಚಾರಕಾರ್ಯಮುಗಿಸಿ ಮನೆಗೆ ಬಂದು ವಿಶ್ರಾಂತಿ ಪಡೆಯುತ್ತಿರುವ ವೇಳೆ ಮುಂಜಾನೆ ಹೃದಯಾಘಾತವಾಗಿದ್ದು ಕುಟುಂಬಸ್ಥರು ಕೂಡಲೇ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.