ನವದೆಹಲಿ, ಮಾ. 23 (DaijiworldNews/HR): ದೇಶಾದ್ಯಂತ ಕೊರೊನಾ ಸೋಂಕಿನ ಸ್ಥಿತಿಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡುವ ಅವಶ್ಯಕತೆಯಿದ್ದು, ನೈರ್ಮಲ್ಯ ಮತ್ತು ಜನನಿಬಿಡ ಸ್ಥಳಗಳಲ್ಲಿ ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು, ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಕಾರ್ಯಕರ್ತರು ಆಸ್ಪತ್ರೆಗಳ ಆವರಣದಲ್ಲಿ ಮಾಸ್ಕ್ ಧರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ.
ಭಾರತದಲ್ಲಿ ಕೊರೊನಾ ಮತ್ತು ಇನ್ಫ್ಲುಯೆನ್ಸ ಪ್ರಕರಣಗಳ ಉಲ್ಬಣದ ಬಗ್ಗೆ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರು, ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಅರೋಗ್ಯ ಸಮಸ್ಯೆ ಹೊಂದಿರುವವರು ಉಸಿರಾಟವನ್ನು ಅನುಸರಿಸಲು ಸಲಹೆ ನೀಡಿದರು.
ಇನ್ನು ಮಾರ್ಚ್ 22 ಕ್ಕೆ ಕೊನೆಗೊಂಡ ವಾರದಲ್ಲಿ ಸರಾಸರಿ ದೈನಂದಿನ ಪ್ರಕರಣಗಳು 888 ರಷ್ಟಿದೆ ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರವು 0.98% ರಷ್ಟಿದೆಯೊಂದಿಗೆ ಹೊಸ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಭೆಯಲ್ಲಿ ತಿಳಿಸಲಾಯಿತು.