ಬೆಂಗಳೂರು, ಮಾ 23 (DaijiworldNews/DB): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆಂಬ ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೊಮ್ಮಾಯಿಯವರು ಈ ರಾಜ್ಯದ ಅಭಿವೃದ್ದಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆಂದು ಹೇಳಿದ್ದರಲ್ಲಿ ಯಾವುದೇ ತಪ್ಪು ಇಲ್ಲ ಎಂದರು.
ಕಾರ್ಯಕ್ರಮವೊಂದರಲ್ಲಿ ಕಳೆದ ಕೆಲ ದಿನಗಳ ಹಿಂದೆ ಮಾತನಾಡಿದ್ದ ಸಿಎಂ ಬೊಮ್ಮಾಯಿ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮತ್ತೊಮ್ಮೆ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆಗ ನಾನೇ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದಿದ್ದರು.