ಹರಿಯಾಣ, ಮಾ 24 (DaijiworldNews/MS): ಸಿಖ್ ಮೂಲಭೂತವಾದಿ ಧರ್ಮಪ್ರಚಾರಕ ಅಮೃತಪಾಲ್ ಸಿಂಗ್ನ ಅಮೃತಪಾಲ್ ಸಿಂಗ್, ಹರಿಯಾಣದಲ್ಲಿ ತಲೆಮರೆಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.
ಹರಿಯಾಣದ ಕುರುಕ್ಷೇತ್ರದಲ್ಲಿ ಅಮೃತಪಾಲ್ ಸಿಂಗ್ ತನ್ನ ಮುಖವನ್ನು ಮರೆಮಾಚಲು ಛತ್ರಿ ಹಿಡಿದುಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಅಮೃತಪಾಲ್ ತಿಳಿ-ನೀಲಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ನಲ್ಲಿ ವಸತಿ ಪ್ರದೇಶದಲ್ಲಿ ರಸ್ತೆಯಲ್ಲಿ ನಡೆಕೊಂಡು ಕಾಣಬಹುದು. ಆತನ ಕೈಯಲ್ಲಿ ಚಿಕ್ಕ ಕೈ ಚೀಲ ಇರುವುದು ನೋಡಬಹುದು.
ಅಮೃತಪಾಲ್ ಸಿಂಗ್ ಮತ್ತು ಆತನ ಸಹಚರ ಪಾಪಲ್ಪ್ರೀತ್ ಸಿಂಗ್ಗೆ ಕುರುಕ್ಷೇತ್ರ ಜಿಲ್ಲೆಯ ತನ್ನ ಮನೆಯಲ್ಲಿ ಆಶ್ರಯ ನೀಡಿದ ಆರೋಪದ ಮೇರೆಗೆ ಬಲ್ಜಿತ್ ಕೌರ್ ಎಂಬ ಮಹಿಳೆಯನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ. ಕುರುಕ್ಷೇತ್ರ ಜಿಲ್ಲೆಯ ಶಹಾಬಾದ್ನಿಂದ ಮಹಿಳೆಯನ್ನು ಬಂಧಿಸಲಾಗಿದ್ದು, ಅವರನ್ನು ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕುರುಕ್ಷೇತ್ರದ ಪೊಲೀಸ್ ವರಿಷ್ಠಾಧಿಕಾರಿ ಸುರೀಂದರ್ ಸಿಂಗ್ ಭೋರಿಯಾ ಮಾಹಿತಿ ನೀಡಿದ್ದಾರೆ.
ಬಂಧಿತ ಮಹಿಳೆ ಮತ್ತು ಪಾಪಲ್ಪ್ರೀತ್ ಸಿಂಗ್ ಎರಡು ವರ್ಷಗಳಿಂದ ಪರಿಚಿತರಾಗಿದ್ದರು. ಬೈಕ್, ಕಾರು, ಎಸ್ಯುವಿಗಳ ಮೂಲಕ ತಪ್ಪಿಸಿಕೊಂಡಿರುವ ಪಾಪಲ್ಪ್ರೀತ್ ಸಿಂಗ್ ಮತ್ತು ಅಮೃತಪಾಲ್ ಸಿಂಗ್ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಸುರೀಂದರ್ ಸಿಂಗ್ ಹೇಳಿದ್ದಾರೆ.