ಬೆಂಗಳೂರು, ಮಾ 21(MSP): ಗುರುವಾರದಿಂದ ಏ.4 ರವರೆಗೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ರಾಜ್ಯಾದ್ಯಂತ ಪಿಯುಸಿಯಂತೆ ಈ ಪರೀಕ್ಷೆಯನ್ನೂ ಸುಗಮವಾಗಿ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯ ಕ್ರಮ ಕೈಗೊಂಡಿದೆ.
ಮಂಗಳೂರು
ಉಡುಪಿ
ರಾಜ್ಯಾದ್ಯಂತ ಒಟ್ಟು 2,847 ಪರೀಕ್ಷಾ ಕೇಂದ್ರಗಳಲ್ಲಿ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗುರುವಾರ ಪ್ರಥಮ ಭಾಷೆ ವಿಷಯಗಳಾದ ಕನ್ನಡ, ತೆಲುಗು, ಹಿಂದಿ , ಮರಾಠಿ , ತಮಿಳು, ತೆಲುಗು , ಉರ್ದು , ಇಂಗ್ಲೀಷ್ ಮತ್ತು ಸಂಸ್ಕೃತ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 9.30 ರಿಂದ ಪರೀಕ್ಷೆ ಆರಂಭಗೊಳ್ಳಲಿದ್ದು, 12.30ಕ್ಕೆ ಪರೀಕ್ಷೆ ಕೊನೆಗೊಳ್ಳಲಿದೆ.
ಪ್ರಶ್ನೆಪತ್ರಿಕೆಗಳು ಸೊರಿಕೆಯಾಗದಂತೆ, ದಾಸ್ತಾನಿಡುವ ಜಿಲ್ಲಾ ಖಜಾನೆಗಳಲ್ಲಿ ಸಿಸಿಟಿವಿ ಅಳವಡಿಸುವ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗುರುತಿನ ಚೀಟಿ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಅರ್ಧ ಗಂಟೆ ಮುಂಚಿತವಾಗಿ ಹಾಜರಿರಬೇಕು. ಅಲ್ಲದೆ ಸ್ಮಾರ್ಟ್ ವಾಚ್ ಹಾಗೂ ಮೊಬೈಲ್ ಪೋನ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ.