ನವದೆಹಲಿ, ಮಾ 24 (DaijiworldNews/MS): ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಬೆನ್ನಲ್ಲೇ ಈ ಹಿನ್ನೆಲೆಯಲ್ಲಿ ಎಐಸಿಸಿ ಕಚೇರಿಯಲ್ಲಿ ಸಂಜೆ 5.30ಕ್ಕೆ ಕಾಂಗ್ರೆಸ್ ತುರ್ತು ಸಭೆ ಕರೆದಿದೆ. ಈ ಸಭೆಯಲ್ಲಿ ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಹೇಗೆ ಹೋರಾಟ ನಡೆಸಬೇಕು ಎನ್ನುವ ಕುರಿತು ರೂಪುರೇಷೆ ಸಿದ್ಧವಾಗಲಿದೆ.
ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದು, ಇವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಹೆಚ್.ಕೆ.ಪಾಟೀಲ್ ಕೂಡ ವರ್ಚುವಲ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಲೋಕಸಭೆ ಸದಸ್ಯತ್ವ ಅನರ್ಹದ ನಂತರ ಪ್ರಕ್ರಿಯಿಸಿದ ಕಾಂಗ್ರೆಸ್ 'ಹೆದರುವುದಿಲ್ಲ ಅಥವಾ ಮೌನವಾಗುವುದಿಲ್ಲ' ಎಂದು ಹೇಳಿದೆ.
ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸತ್ಯ ಹೇಳಿದಕ್ಕೆ ರಾಹುಲ್ ಗಾಂಧಿ ಅವ್ರ ಸದಸ್ಯತ್ವ ಅನರ್ಹಗೊಳಿಸಿದ್ದಾರೆ. ವ್ಯವಸ್ಥಿತವಾಗಿ ಸತ್ಯ ಹೇಳುವವರನ್ನ ಮುಗಿಸಲಾಗ್ತಿದೆ' ಎಂದು ಹೇಳಿದ್ದಾರೆ.