ಬೆಂಗಳೂರು, ಮಾ 24 (DaijiworldNews/DB): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಲಾಗಿದ್ದ ಆದೇಶ ಇದೀಗ ಈ ತಿಂಗಳಾಂತ್ಯದವರೆಗೆ ವಿಸ್ತರಣೆಯಾಗಿದೆ.
ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಅರ್ಜಿ ವಿಚಾರಣೆ ಇನ್ನೊಂದು ಪೀಠದಲ್ಲಿರುವ ಕಾರಣ ಇದೇ ಪೀಠಕ್ಕೆ ಅರ್ಜಿ ವಿಚಾರಣೆ ವರ್ಗಾಯಿಸಲು ಸೂಚಿಸಲಾಗಿತ್ತು. ಈ ಹಿಂದೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಹೊರಡಿಸಲಾಗಿದ್ದ ಆದೇಶವನ್ನು ಮಾರ್ಚ್ 24ರವರೆಗೆ ವಿಸ್ತರಣೆ ಮಾಡಲಾಗಿತ್ತು.
ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡಿ ಪತ್ನಿ, ಪುತ್ರಿಗೆ ಮಾನಸಿಕ ಒತ್ತಡ ಹೇರುತ್ತಿದ್ದಾರೆ. ಈ ಪ್ರಕರಣದ ಸಿಬಿಐ ತನಿಖೆಗೆ ತಡೆ ನೀಡುವಂತೆ ಕೋರಿ ಡಿ.ಕೆ. ಶಿವಕುಮಾರ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.