ನವದೆಹಲಿ, ಮಾ 25 (DaijiworldNews/HR): ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶನಿವಾರ ಏಪ್ರಿಲ್ 5ಕ್ಕೆ ಮುಂದೂಡಿದೆ.
ಸಿಸೋಡಿಯಾ ಪರ ವಕೀಲರು ತಮ್ಮ ಕಕ್ಷಿದಾರರ ಜಾಮೀನು ಅರ್ಜಿಗೆ ಸಲ್ಲಿಸಿದ ಇಡಿ ಉತ್ತರಕ್ಕೆ ಪ್ರತಿಕ್ರಿಯಿಸಲು ಸಮಯ ಕೋರಿದ ನಂತರ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ವಿಚಾರಣೆಯನ್ನು ಮುಂದೂಡಿದ್ದಾರೆ.
ಇನ್ನು ಮಾರ್ಚ್ 9 ರಂದು ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಬಂಧಿಸಲಾಗಿದ್ದು, ಅಲ್ಲಿ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇರಿಸಲಾಗಿತ್ತು.