ಬೆಂಗಳೂರು, ಮಾ 25 (DaijiworldNews/HR): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಮೀಸಲಾತಿ ಕುರಿತ ತೀರ್ಮಾನಗಳು ಪ್ರಾಮಾಣಿಕವಲ್ಲ. ಎಲ್ಲವೂ ಚುನಾವಣಾ ಗಿಮಿಕ್ಕುಗಳು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಯ ಕುರಿತು ತೆಗೆದುಕೊಂಡ ತೀರ್ಮಾನಗಳು ಸಮುದಾಯಗಳಲ್ಲಿ ಹಲವು ರೀತಿಯ ಗೊಂದಲ, ಅಶಾಂತಿಯನ್ನು ಹುಟ್ಟು ಹಾಕಿವೆ ಎಂದರು.
ಇನ್ನು ಮುಖ್ಯಮಂತ್ರಿಗಳು ಮೀಸಲಾತಿಯ ಸಮಸ್ಯೆಯನ್ನು ಬಗೆಹರಿಸಿದ್ದೇನೆಂದು ಹೇಳಿಕೆ ಕೊಟ್ಟಿದ್ದಾರೆ. ಆದರೆ ಸಮಸ್ಯೆಯನ್ನು ಪರಿಹರಿಸುವ ಬದಲಿಗೆ ಹೆಚ್ಚಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂಬುದು ಜನರ ಪ್ರತಿಕ್ರಿಯೆಗಳನ್ನು ನೋಡಿದ ಮೇಲೆ ಸ್ಪಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.