ನವದೆಹಲಿ, ಮಾ 26 (DaijiworldNews/HR): ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶದಾದ್ಯಂತ ಒಂದು ದಿನದ ಸತ್ಯಾಗ್ರಹವನ್ನು ಆಯೋಜಿಸಿದ್ದು, ರಾಜ್ಘಾಟ್ನಲ್ಲಿ ಸತ್ಯಾಗ್ರಹ ನಡೆಸಲು ಕಾಂಗ್ರೆಸ್ಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಷ್ಟ್ರ ರಾಜಧಾನಿಯ ರಾಜ್ ಘಾಟ್ನಲ್ಲಿ ಸತ್ಯಾಗ್ರಹ ನಡೆಸಲಿದ್ದು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳು ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಸತ್ಯಾಗ್ರಹವನ್ನು ಆಯೋಜಿಸಲು ತಿಳಿಸಲಾಗಿದೆ.
ಇನ್ನು ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್ ಮತ್ತು ಭೂಪೇಶ್ ಬಘೇಲ್ ಅವರೊಂದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಅವರೊಂದಿಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಸೇರಿದ್ದಾರೆ. ಆದರೆ ರಾಜ್ಘಾಟ್ನಲ್ಲಿ ಸತ್ಯಾಗ್ರಹ ನಡೆಸಲು ಕಾಂಗ್ರೆಸ್ಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ಳಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರ ಕಾರಣಗಳಿಂದಾಗಿ ಪಕ್ಷದ ಮನವಿಯನ್ನು ತಿರಸ್ಕರಿಸಲಾಗಿದೆ.