ನವದೆಹಲಿ, ಮಾ 26 (DaijiworldNews/DB): ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಬಯೋವನ್ನು ಬದಲಿಸಿಕೊಂಡಿದ್ದು, Dis'qualified' MP ಎಂದು ಬರೆದುಕೊಂಡಿದ್ದಾರೆ.
ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಅವರು ತಮ್ಮ ಬಯೋವನ್ನು ಬದಲಾಯಿಸಿಕೊಂಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ, Dis'qualified' MP ಎಂಬುದಾಗಿ ಬಯೋವನ್ನು ಬದಲಾಯಿಸಿಕೊಂಡಿದ್ದಾರೆ.
ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ಗುಜರಾತ್ನ ಸೂರತ್ನ ನ್ಯಾಯಾಲಯವು ರಾಹುಲ್ ಗಾಂಧಿಯವರನ್ನು ದೋಷಿ ಎಂದು ಘೋಷಿಸಿ 2 ವರ್ಷ ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಂಡಿದ್ದರು.
ಇನ್ನು ಅದಾನಿ ಸಮೂಹ ಸಂಸ್ಥೆಗಳ ಹಗರಣದ ಬಗ್ಗೆ ಸಂಸತ್ತಿನಲ್ಲಿ ನಾನು ಧ್ವನಿ ಎತ್ತುಬ ಬಗ್ಗೆ ಆತಂಕಗೊಂಡ ಪ್ರಧಾನಿ ನರೇಂದ್ರ ಮೋದಿಯವರು ನನ್ನನ್ನು ಅನರ್ಹಗೊಳಿಸುವ ಮೂಲಕ ಪ್ರತಿಪಕ್ಷಗಳಿಗೆ ದೊಡ್ಡ ಅಸ್ತ್ರ ನೀಡಿದ್ದಾರೆ. ನಾನು ಸಾವರ್ಕರ್ ಅಲ್ಲ, ನಾನು ಗಾಂಧಿ. ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಶನಿವಾರವಷ್ಟೇ ರಾಹುಲ್ ಹೇಳಿದ್ದರು.