ಬೆಂಗಳೂರು, ಮಾ. 26 (DaijiworldNews/SM): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದರ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪಂಜಿನ ಮೆರವಣಿಗೆ ನಡೆಸಿದರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ ಫ್ರೀಡ್ಂ ಪಾರ್ಕ್ ವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಆದರೆ, ಮಾರ್ಗ ಮಧ್ಯದಲ್ಲಿಯೇ ಅವರನ್ನು ಪೊಲೀಸರು ತಡೆದರು.
ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.