ಬೆಂಗಳೂರು, ಮಾ. 26 (DaijiworldNews/SM): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಗರದ ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು, ಮಾ.26 ರಂದು ಅನಾವರಣಗೊಳಿಸಿದರು.
ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳು ಸ್ಥಾಪನೆಯಾಗಿವೆ.
ಸುಮಾರು ರೂ.8 ಕೋಟಿ ವೆಚ್ಚದಲ್ಲಿ ಪ್ರತಿಮೆ ಸಿದ್ಧಗೊಂಡಿದ್ದು, ಕಳೆದ ಜನವರಿಯಲ್ಲಿ ಪ್ರತಿಮೆ ಸ್ಥಾಪನೆ ಸಂಬಂಧ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.