ಗುಬ್ಬಿ, ಮಾ 27 (DaijiworldNews/MS): ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಉಚ್ಚಟಿತ ಶಾಸಕ ಎಸ್.ಆರ್ ಶ್ರೀನಿವಾಸ್ (ವಾಸು) ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಅವರು ರಾಜೀನಾಮೆ ಬಳಿಕ ಕಾಂಗ್ರೆಸ್ ಸೇರುವುದಾಗಿ ಈ ಹಿಂದೆಯೇ ಹೇಳಿಕೊಂಡಿದ್ದರು. ಹೀಗಾಗಿ ಇಂದೇ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಮುಂಬರುವ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.