ನವದೆಹಲಿ, ಮಾ 27 (DaijiworldNews/HR): ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ (ಕೆಎಸ್ಡಿಎಲ್) ಗುತ್ತಿಗೆ ಹಗರಣ ಪ್ರಕರಣದಲ್ಲಿ ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನೋಟಿನ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಬಿಜೆಪಿ ಶಾಸಕ ಗೆ ನೋಟಿಸ್ ಜಾರಿ ಮಾಡಿದೆ.
ಇನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಖಾತೆ ಅಧಿಕಾರಿಯಾಗಿದ್ದ ಪ್ರಶಾಂತ್ ಮಾಡಾಳ್ ನನ್ನು ಕೆಎಸ್ಡಿಎಲ್ ಕಚೇರಿಯಲ್ಲಿ ತಂದೆಯ ಪರವಾಗಿ 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಮಾರ್ಚ್ 2 ರಂದು ಬಂಧಿಸಿದ್ದರು.
ಶಾಸಕರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ವಿರೂಪಾಕ್ಷಪ್ಪ ಅವರು ತಮ್ಮ ಮಗನ ಬಂಧನದ ನಂತರ ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಷರತ್ತುಬದ್ಧ ಜಾಮೀನು ನೀಡುವಾಗ ಆದೇಶ ಪ್ರತಿಯನ್ನು ಸ್ವೀಕರಿಸಿದ 48 ಗಂಟೆಗಳ ಒಳಗೆ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಹೈಕೋರ್ಟ್ ಶಾಸಕರಿಗೆ ಸೂಚಿಸಿತ್ತು. 5 ಲಕ್ಷ ಬಾಂಡ್ಗೆ ಒಳಪಟ್ಟು ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿತ್ತು.