ಬೆಂಗಳೂರು, ಮಾ 27 (DaijiworldNews/HR): ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.
ಇಂದು ಹೈಕೋರ್ಟ್ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದು, ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಇನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ (ಕೆಎಸ್ಡಿಎಲ್) ಗುತ್ತಿಗೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಜೂರು ಮಾಡಿತ್ತು.