ಮಂಡ್ಯ,ಮಾ21(AZM):ಸುಮಲತಾ ಅಂಬರೀಶ್ ಹಾಗೂ ನಿಖಿಲ್ ಕುಮಾರಸ್ವಾಮಿಯವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಹಿನ್ನಲೆ ಏ.18ರವರೆಗೆ ಅವರ ಚಲನಚಿತ್ರಗಳನ್ನು ದೂರದರ್ಶನದಲ್ಲಿ ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ ಏ.18ರವರೆಗೆ ಸುಮಲತಾ ಮತ್ತು ನಿಖಿಲ್ ಅಭಿನಯಿಸಿರುವ ಯಾವುದೇ ಚಿತ್ರಗಳನ್ನು ಸರ್ಕಾರಿ ಸ್ವಾಮ್ಯದ ದೂರದರ್ಶನದಲ್ಲಿ ಪ್ರಸಾರ ಮಾಡಲು ನಿಷೇಧ ಹೇರಲಾಗಿದೆ.
ಮಂಡ್ಯ ಕ್ಷೇತ್ರದ ಚುನಾವಣಾಧಿಕಾರಿ ಎನ್.ಮಂಜುಶ್ರೀ ಈ ಬಗ್ಗೆ ಆದೇಶ ಹೊರಡಿಸಿದ್ದು , ಸುಮಲತಾ ಹಾಗೂ ನಿಖಿಲ್ ರವರ ಚಿತ್ರಗಳು ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಇಬ್ಬರು ಅಭ್ಯರ್ಥಿಗಳ ಚಲನಚಿತ್ರಗಳನ್ನು ದೂರದರ್ಶನದಲ್ಲಿ ಪ್ರಸಾರ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.