ನವದೆಹಲಿ, ಮಾ 28 (DaijiworldNews/HR): ವೀರ್ ಸಾವರ್ಕರ್ ಅವರು ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದರು ಎಂಬುದನ್ನು ಸಾಬೀತುಪಡಿಸಿ ಎಂದು ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ರಾಹುಲ್ ಗಾಂಧಿ ಅವರಿಗೆ ಸವಾಲು ಹಾಕಿದ್ದಾರೆ.
ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ ಹಾಗಾಗಿ ನಾನು ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ರಂಜಿತ್, ಸಾವರ್ಕರ್ ಕ್ಷಮೆಯಾಚಿಸಿದ್ದರು ಎಂಬುದನ್ನು ದಾಖಲೆ ಸಮೇತ ಸಾಬೀತುಪಡಿಸಿ ಎಂದು ಹೇಳಿದ್ದಾರೆ.
ಇನ್ನು ರಾಜಕೀಯ ಪ್ರಚಾರಕ್ಕಾಗಿ ದೇಶಭಕ್ತರ ಹೆಸರನ್ನು ಬಳಸುವುದು ತಪ್ಪು, ಇವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು ಎಂದು ರಂಜಿತ್ ಸಾವರ್ಕರ್ ಆಗ್ರಹಿಸಿದ್ದಾರೆ.