ನವದೆಹಲಿ, ಮಾ 28 (DaijiworldNews/HR): "ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಡೀ ಒಬಿಸಿ ಸಮುದಾಯವನ್ನು ಅವಮಾನಿಸಿದ್ದಾರೆ" ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಪ್ರಧಾನಿ ಮೋದಿಯನ್ನು ಅವಮಾನಿಸುವ ಪ್ರಯತ್ನದಲ್ಲಿ ರಾಹುಲ್ ಗಾಂಧಿ ಅವರು ಇಡೀ ಒಬಿಸಿ ಸಮುದಾಯವನ್ನು ಅವಮಾನಿಸಿದ್ದಾರೆ. ಗಾಂಧಿ ಕುಟುಂಬ ದಲಿತ ಅಥವಾ ಹಿಂದುಳಿದ ಸಮುದಾಯಗಳ ಜನರನ್ನು ಅವಮಾನಿಸಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಬುಡಕಟ್ಟು ಕುಟುಂಬದ ದ್ರೌಪದಿ ಮುರ್ಮು ರಾಷ್ಟ್ರಪತಿಯಾದಾಗ ಅವರನ್ನು ಗಾಂಧಿ ಕುಟುಂಬದ ಸೂಚನೆಯ ಮೇರೆಗೆ ಕಾಂಗ್ರೆಸ್ ಸದಸ್ಯರೊಬ್ಬರು ಅವಮಾನಿಸಿದ್ದರು" ಎಂದರು.
ಇನ್ನು ರಾಹುಲ್ ಗಾಂಧಿ ಒಬ್ಬ ವ್ಯಕ್ತಿಯನ್ನು ನಿಂದಿಸದೆ ಇಡೀ ಒಬಿಸಿ ಸಮುದಾಯವನ್ನು ನಿಂದನೆ ಮಾಡಿದ್ದಕ್ಕಾಗಿ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಗುರಿ ಪ್ರಧಾನಿ ಮೋದಿ ಆದರೆ ಪ್ರಧಾನಿ ಮೋದಿಯ ಗುರಿ ದೇಶದ ಅಭಿವೃದ್ಧಿ ಎಂದು ಇರಾನಿ ಹೇಳಿದ್ದಾರೆ.