ನವದೆಹಲಿ, ಮಾ 28 (DaijiworldNews/MS): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿ ೮೦ ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಮೊದಲ ಬಾರಿಗೆ ಮತದಾರರು 2018-19 ರಿಂದ 9.17 ಲಕ್ಷದಷ್ಟು ಹೆಚ್ಚಿದ್ದಾರೆ. ಏಪ್ರಿಲ್ 1ಕ್ಕೆ 18 ವರ್ಷ ತುಂಬುವ ಎಲ್ಲಾ ಯುವ ಮತದಾರರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಬಹುದು ಎಂದು ಹೇಳಿದ್ದಾರೆ
ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 5,21,73,579 ನೋಂದಾಯಿತ ಮತದಾರರನ್ನು ಹೊಂದಿದೆ.ಈ ಪೈಕಿ 12.15 ಲಕ್ಷ ಯುವ ಮತದಾರರಿದ್ದಾರೆ. ರಾಜ್ಯಾದ್ಯಂತ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.