ನವದೆಹಲಿ, ಮಾ 28 (DaijiworldNews/MS): ಲಕ್ಷದ್ವೀಪದ ರಾಷ್ಟ್ರೀಯ ಕ್ರಾಂತಿ ಪಕ್ಷದ(NCP) ಮುಖಂಡ ಮೊಹಮ್ಮದ್ ಫೈಜಲ್ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ.
ಮೊಹಮ್ಮದ್ ಫೈಜಲ್ ಅವರನ್ನು ಕೊಲೆ ಯತ್ನ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಂತರ ಜನವರಿ 11 ರಂದು ನ್ಯಾಯಾಲಯ 10 ವರ್ಷಗಳ ಶಿಕ್ಷೆ ವಿಧಿಸಿತ್ತು. ಆ ಬಳಿಕ ಜನವರಿ ೨೩ ರಂದು ಅವರ ಸದಸ್ಯತ್ವವನ್ನು ರದ್ದುಗೊಳಿಸಿಸಲಾಗಿತ್ತು. ಈ ಶಿಕ್ಷೆಯನ್ನು ಅವರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿತ್ತು.
ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಕೆಲವೇ ಕ್ಷಣಗಳ ಮೊದಲು, ಲಕ್ಷದ್ವೀಪ್ ಸಂಸದ ಮೊಹಮ್ಮದ್ ಫೈಜಲ್ ಅವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಹೈಕೋರ್ಟ್ ತನ್ನ ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲು ಲೋಕಸಭೆಯ ಕಾರ್ಯದರ್ಶಿಗೆ ನಿರ್ದೇಶನ ನೀಡುವಂತೆ ಸಂಸದ ಎಸ್ಸಿಗೆ ಮನವಿ ಸಲ್ಲಿಸಿದ್ದರು.