ನವದೆಹಲಿ, ಮಾ 30 (DaijiworldNews/HR): ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆ ಸಾಮಾನ್ಯ ಜನರಿಗೆ ಮತ್ತು ಜನಪ್ರತಿನಿಧಿಗಳಿಗೆ ಭಿನ್ನ ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಇನ್ನು ಒಬ್ಬ ಸಂಸದ ಮತ್ತು ವಿಧಾನಸಭೆಯ ಸದಸ್ಯರಿಗೆ ಶಿಕ್ಷೆಯನ್ನು ಅಮಾನತುಗೊಳಿಸಲು ವಿಭಿನ್ನ ನಿಯಮ ಇರುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.