ಬೆಂಗಳೂರು, ಮಾ 30 (DaijiworldNews/HR): ಮಂಡ್ಯ ಜಿಲ್ಲೆಯಲ್ಲಿ ಪ್ರಚಾರದ ವೇಳೆ ಜನರ ಮೇಲೆ ಹಣ ಎಸೆದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸ್ಥಳೀಯ ಚುನಾವಣಾಧಿಕಾರಿಯೊಬ್ಬರು ಡಿ. ಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 155 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರದ ವೇಳೆ ನಗದು ಎಸೆದಿದ್ದಾರೆ ಎಂಬ ಮಾಧ್ಯಮ ವರದಿಗಳ ಆಧಾರದ ಮೇಲೆ ಲಿಖಿತ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಡಿಕೆ ಶಿವಕುಮಾರ್ ತಮ್ಮ ಜೇಬಿನಿಂದ ಹಣವನ್ನು ಜಾನಪದ ಕಲಾವಿದರಿಗೆ ನೀಡಲು ಪ್ರಯತ್ನಿಸಿದರು, ಆದರೆ ಅವರು ವಾಹನದ ಮೇಲೆ ನಿಂತಿದ್ದರಿಂದ ಅವರನ್ನು ತಲುಪಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ಕಲಾವಿದರ ಕಡೆಗೆ ನೋಟುಗಳನ್ನು ಎಸೆದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.