ಮೈಸೂರು, ಮಾ 31 (DaijiworldNews/SM): ಪುತ್ರ ವಿಜಯೇಂದ್ರ ನಾನು ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿಯೇ ಈ ಬಾರಿ ಚುನಾವಣೆಗೆ ನಿಲ್ಲಬೇಕು. ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾದಿಂದ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ. ಆದರೆ ನಾನೇ ವರುಣಾದಿಂದ ಸ್ಪರ್ಧೆ ಬೇಡವೆಂದು ಹೇಳಿದ್ದೇನೆ ಎಂದರು.
ಈ ವಿಚಾರದಲ್ಲಿ ನಾನು ಹೈಕಮಾಂಡ್ ಮನವೊಲಿಸುತ್ತೇನೆ. ಯಾವ ಕಾರಣಕ್ಕೂ ವಿಜಯೇಂದ್ರ ವರುಣಾದಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಶಿಕಾರಿಪುರ ಬಿಟ್ಟು ಅವರು ಬರುವುದಿಲ್ಲ. ಕಾರ್ಯಕರ್ತರು ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡುತ್ತಾರೆ. ವರುಣಾ ಕ್ಷೇತ್ರದಿಂದ ಒಳ್ಳೆ ಅಭ್ಯರ್ಥಿ ಹಾಕುತ್ತೇವೆ. ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ಇತ್ತು. ಆದರೆ ನಾನೇ ಶಿಕಾರಿಪುರದಿಂದ ನಿಲ್ಲಬೇಕು ಅಂಥ ಹೇಳಿದ್ದೇನೆ. ಹೈಕಮಾಂಡ್ಗೆ ನಾನೇ ಈ ವಿಚಾರದಲ್ಲಿ ಮನವೊಲಿಸುತ್ತೇನೆ ಎಂದು ಹೇಳಿದರು.