ಬೆಂಗಳೂರು, ಏ 01 (DaijiworldNews/HR): "ನನ್ನ ಗಂಡ ಲಿಪ್ಸ್ಟಿಕ್ ಹಚ್ಚಿಕೊಂಡು ಹೆಂಗಸರ ಒಳ ಉಡುಪು ತೊಟ್ಟು ವಿಚಿತ್ರವಾಗಿ ವರ್ತಿಸುತ್ತಾರೆ" ಎಂದು ಆರೋಪಿಸಿ ಮಹಿಳೆಯೊಬ್ಬರು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆಗೆ ದೂರು ನೀಡಿರುವ ಪ್ರಸಂಗ ನಡೆದಿದೆ.
"ನನ್ನ ಗಂಡ ಲಿಪ್ಸ್ಟಿಕ್ ಹಚ್ಚಿಕೊಂಡು ಹೆಂಗಸರ ಒಳ ಉಡುಪು ತೊಟ್ಟು ದಿನದಿಂದ ದಿನಕ್ಕೆ ವಿಚಿತ್ರವಾಗಿ ವರ್ತಿಸುತ್ತಾರೆ ಇದನ್ನು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡುತ್ತಿದ್ದಾರೆ" ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ.
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, "ಕುಮಾರಸ್ವಾಮಿ ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ ಮಹಿಳೆಯಿಂದ ದೂರು ಬಂದಿದ್ದು, ವರದಕ್ಷಿಣೆಗಾಗಿ ಪೀಡಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.
ಇನ್ನು ವನುಷಾ ಎಂಬಾಕೆ ಕಳೆದ ಮೂರು ವರ್ಷಗಳ ಹಿಂದೆ ಮ್ಯಾಟ್ರಿಮೋನಿ ಪ್ರಣವ್ ಪರಿಚಯಗೊಂಡಿದ್ದು, ತಾನು ಎಂಟೆಕ್ ಪದವೀಧರ, ಒಳ್ಳೆ ಕೆಲಸದಲ್ಲಿ ಇರುವುದಾಗಿ ಹೇಳಿದ್ದ. ಗುರು-ಹಿರಿಯರ ಸಮ್ಮುಖದಲ್ಲಿ 2020ರಲ್ಲಿ ಇಬ್ಬರ ಮದುವೆಯಾಗಿತ್ತು. ವರದಕ್ಷಿಣೆ ರೂಪದಲ್ಲಿ 800 ಗ್ರಾಂ ಚಿನ್ನ, ಒಂದು ಕೆ.ಜಿ.ಬೆಳ್ಳಿ ಹಾಗೂ ಐದು ಲಕ್ಷ ಹಣ ನೀಡಲಾಗಿತ್ತು.
ಆದರೆ ಮೊದಲ ದಿನದಿಂದಲೂ ವಿಚಿತ್ರವಾಗಿ ವರ್ತಿಸುತ್ತಿರುವ ಪತಿ, ತಮಗೆ ಪುರುಷರೆಂದರೆ ಇಷ್ಟವೆಂದು ಕೂಗಾಡುತ್ತಾರೆ. ಅದನ್ನು ಪ್ರಶ್ನಿಸಿದರೆ ಮನೆ ಬಿಟ್ಟು ಹೋಗುವಂತೆ ಹಾಗೂ ವರದಕ್ಷಿಣೆ ತರುವಂತೆ ಪೀಡಿಸುತ್ತಾರೆ. ಹಲವು ಬಾರಿ ಹಲ್ಲೆ ಕೂಡ ಮಾಡಿದ್ದಾರೆ ಎಂದು ವನುಷಾ ದೂರು ನೀಡಿದ ಮೇರೆಗೆ ಪತಿ ಪ್ರಣವ್, ಮಾವ ಮೂರ್ತಿ ಹಾಗೂ ಅತ್ತೆ ಶ್ರೀದೇವಿ ಎಂಬುವರ ವಿರುದ್ಧ ವರದಕ್ಷಣೆ ಕಿರುಕುಳದಡಿ ಎಫ್ಐಆರ್ ದಾಖಲಾಗಿದೆ.