ನವದೆಹಲಿ, ಮಾ (DaijiworldNews/HR): "ಸಾವರ್ಕರ್ ಅವರು ಕಠಿಣ ಜೈಲುವಾಸ ಮತ್ತು ಕಷ್ಟಗಳನ್ನು ಅನುಭವಿಸಿದ್ದು ದೇಶದ ಸ್ವಾತಂತ್ರ್ಯಕ್ಕಾಗಿಯೇ ಹೊರತು ಮೋದಿಯನ್ನು ಪ್ರಧಾನಿಯನ್ನಾಗಿ ಮಾಡಲು ಅಲ್ಲ" ಎಂದು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, "ದೇಶದ ಸ್ವಾತಂತ್ರ್ಯಕ್ಕಾಗಿ ಸಾವರ್ಕರ್ ಅವರು ಕಠಿಣ ಜೈಲುವಾಸ ಮತ್ತು ಕಷ್ಟಗಳನ್ನು ಅನುಭವಿಸಿದ್ದಾರೆ. ಆದರೆ ನೀವು ಸಾವರ್ಕರ್ ಅವರ 'ಅಖಂಡ ಭಾರತ' ಕನಸನ್ನು ನನಸಾಗಿಸುವಿರಾ?" ಎಂದು ಪ್ರಶ್ನಿಸಿದ್ದಾರೆ.
ಇನ್ನು ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಸಾವರ್ಕರ್ ಮತ್ತು ಸರ್ದಾರ್ ಪಟೇಲ್ ಅವರ ಆದರ್ಶಗಳನ್ನು ಅನುಸರಿಸಬೇಕು. ಕೆಲವು ಸಮಯದ ಹಿಂದೆ, ಅಮಿತ್ ಶಾ ಅವರು ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಅವರಿಗೆ ಅವರ ಸ್ಥಾನವನ್ನು ತೋರಿಸಿ ಎಂದು ಹೇಳಿದ್ದರು. ಇದು ನನ್ನ ಸ್ಥಳ. ಆದರೆ ನೀವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಸ್ಥಳವನ್ನು ನಮಗೆ ಯಾವಾಗ ತೋರಿಸುತ್ತೀರಿ" ಎಂದು ಆಕ್ರೋಶ ವ್ಯಕ್ತಪಡೆಸಿದ್ದಾರೆ.
ಭಾರತೀಯ ಜನತಾ ಪಕ್ಷ ಎಂದು ಕರೆದರೆ ಅದು ಜನರಿಗೆ ಮಾಡುವ ಅವಮಾನ. ಅವರು ವಿರೋಧ ಪಕ್ಷದ ನಾಯಕರ ಮೇಲೆ ಭ್ರಷ್ಟಾಚಾರದ ಆರೋಪದ ಮೇಲೆ ದಾಳಿ ಮಾಡುತ್ತಾರೆ, ಬಳಿಕ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.