ಬೆಂಗಳೂರು, ಏ 05 (DaijiworldNews/MS): ಬಹು ನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಲಿದೆ. ಬುಧವಾರ ಹಲವು ಸಭೆಗಳನ್ನು ಮಾಡಿದ್ದ ಕಾಂಗ್ರೆಸ್ ಗುರುವಾರ ಬೆಳಗ್ಗೆ 11 ಗಂಟೆಗೆ 2 ನೇ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.
ಇನ್ನು ಮೊದಲ ಪಟ್ಟಿಯನ್ನು ಕಾಂಗ್ರೆಸ್ ಈಗಾಗಲೇ ಬಿಡುಗಡೆ ಮಾಡಿತ್ತು. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಎರಡನೇ ಪಟ್ಟಿಯಲ್ಲಿ ಸುಮಾರು ಐವತ್ತು ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಬಹುದು ಎಂದು ಕಾಂಗ್ರೆಸ್ ಉನ್ನತ ಮೂಲಗಳು ಹೇಳಿವೆ.
ಕಾಂಗ್ರೆಸ್ ಹೆಚ್ಚಾಗಿ ಹಾಲಿ ಶಾಸಕರು ಅಥವಾ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರಿಂದ ಮೊದಲ ಪಟ್ಟಿಯನ್ನು ಸುಲಭವಾಗಿ ಸಿದ್ಧಪಡಿಸಿ ಬಿಡುಗಡೆ ಮಾಡಿತ್ತು. ಆದರೆ, ಎರಡನೇ ಪಟ್ಟಿಯಲ್ಲಿ ಸಮೀಕ್ಷೆ ವರದಿಗಳು ಹಾಗೂ ಗ್ರೌಂಡ್ ರಿಪೋರ್ಟ್ ಗಳ ಮೇಲೆ ಅವಲಂಬಿತರಾಗಿರುವುದರಿಂದ ಪಟ್ಟಿ ಅಂತಿಮಗೊಳಿಸಲು ಕಾಲಾವಕಾಶ ತೆಗೆದುಕೊಂಡಿತ್ತು. ದೆಹಲಿಯಲ್ಲಿ ನಡೆದ ಮ್ಯಾರಥಾನ್ ಸಭೆಯ ಬಳಿಕವೂ ಒಮ್ಮತ ಮೂಡದಿರುವುದು ಇದಕ್ಕೆ ಕಾರಣ. ಹೀಗಾಗಿ ೩೫ಕ್ಕೂ ಹೆಚ್ಚು ಅಭ್ಯರ್ಥಿಗಳ ಅಂತಿಮವಾಗಿ, ಅಥವಾ ಹಂತಹಂತವಾಗಿ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯ ಬಳಿಕ ಮಾಹಿತಿಯನ್ನು ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಇಂದು ಬೆಳಿಗ್ಗೆ 11 ಗಂಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಅದರಂತೆ ಇಂದು ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟವಾಗಲಿದೆ.