ರಾಂಚಿ, ಏ 05 (DaijiworldNews/MS): ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಗುರುವಾರ ಬೆಳಗ್ಗೆಇಂದು ಬೆಳಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜಗರ್ನಾಥ್ ಮಹತೋ ಅವರು ನಿಧನವನ್ನು ಜಾರ್ಖಾಂಡ್ ಸಿಎಂ ಹೇಮಂತ್ ಸೋರೆನ್ ಅವರು ದೃಢಪಡಿಸಿದ್ದಾರೆ.
ಜಗರ್ನಾಥ್ ಸೆಪ್ಟೆಂಬರ್ 2020ರಲ್ಲಿ ಮಹತೋ ಅವರು ಕೊರೋನಾ ಸೋಂಕಿಗೆ ಒಳಗಾಗಿದ್ದರು. ಇದರಿಂದಾಗಿ ಅವರ ಶ್ವಾಸಕೋಶ ಸಂಪೂರ್ಣವಾಗಿ ಹಾಳಾಗಿತ್ತು. ಬಳಿಕ ಅವರನ್ನು 21 ದಿನಗಳ ಕಾಲ ಲೈಫ್ ಸಪೋರ್ಟ್ನಲ್ಲಿ ಇರಿಸಲಾಗಿತ್ತು. ಇದಾದ ಬಳಿಕ ಚೆನ್ನೈನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಇತ್ತೀಚೆಗೆ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಜಗರ್ನಾಥ್ ಮಹತೋ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆ ನಂತರ ಅವರನ್ನು ಆಂಬ್ಯುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮಹತೋ ಅವರು 2019ರಲ್ಲಿ ದುಮ್ರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಅವರು ಹಲವಾರು ಬಾರಿ ಜಾರ್ಖಂಡ್ ವಿಧಾನಸಭೆ ಸದಸ್ಯರಾಗಿದ್ದರು.