ಬೆಂಗಳೂರು, ಏ 06 (DaijiworldNews/MS): ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ..
ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಹಾರಿರುವ ಮೂವರು ನಾಯಕರಿಗೆ ಈ ಬಾರಿ ಟೆಕೆಟ್ ಲಭಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಎನ್ ವೈ ಗೋಪಾಲಕೃಷ್ಣ ಅವರಿಗೆ ಮೊಣಕಾಲ್ಮೂರು ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಜೆಡಿಎಸ್ ತೊರೆದಿದ್ದ ಮಾಜಿ ಶಾಸಕ ಎಸ್ .ಆರ್ ಶ್ರೀನಿವಾಸ್ಗೆ ಗುಬ್ಬಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಹಾಗೆಯೇ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರಿಗೆ ಗುರಮಿಠ್ಕಲ್ ಕ್ಷೇತ್ರದಿಂದ ಟಿಕೆಟ್ ಘೋಷಿಸುವ ಮೂಲಕ ಮೂವರಿಗೆ ಅವಕಾಶ ನೀಡಲಾಗಿದೆ.
ಆದರೆ, ಎರಡನೇ ಪಟ್ಟಿಯಲ್ಲೂ ಅಖಂಡ ಶ್ರೀನಿವಾಸ್ ಮೂರ್ತಿ ಹೆಸರು ಕಾಣಿಸಿಕೊಂಡಿಲ್ಲ. ಜೊತೆಗೆ ಲಿಂಗಸುಗೂರಿನ ಹಾಲಿ ಶಾಸಕ ಡಿಎಸ್ ಹುಲಗೇರಿ, ಹರಿಹರ ಕ್ಷೇತ್ರದ ಹಾಲಿ ಶಾಸಕ ರಾಮಪ್ಪ, ಕುಂದಗೋಳದ ಹಾಲಿ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್ ಘೋಷಣೆ ಆಗಿಲ್ಲ.
ಜಗರ್ನಾಥ್ ಮಹತೋ ಜೆಎಂಎಂ ಪಕ್ಷದ, ಗಿರಿದಿಹ್ನ ಡುಮ್ರಿ ಕ್ಷೇತ್ರದ ಹಿರಿಯ ಶಾಸಕರಾಗಿದ್ದರು. ಶಿಬು ಸೊರೆನ್ ನೇತೃತ್ವದ ಪ್ರತ್ಯೇಕ ರಾಜ್ಯ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು.