ನವದೆಹಲಿ, ಏ 06 (DaijiworldNews/HR): ಮಾಜಿ ರಕ್ಷಣಾ ಸಚಿವ ಎಕೆ ಆ್ಯಂಟನಿ ಅವರ ಪುತ್ರ ಅನಿಲ್ ಆ್ಯಂಟನಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಅನಿಲ್ ಆ್ಯಂಟನಿ ಅವರನ್ನು ಬಿಜೆಪಿ ಹಿರಿಯ ನಾಯಕರು, ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ವಿ ಮುರಳೀಧರನ್ ಅವರು ಆ್ಯಂಟನಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಆ್ಯಂಟನಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಲವಾದ ದೃಷ್ಟಿಕೋನವಿದೆ, ನಾನು ರಾಷ್ಟ್ರೀಯ ಏಕೀಕರಣಕ್ಕೆ ಕೊಡುಗೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ನಲ್ಲಿರುವ ಕೆಲವರು ಪರಿವಾರಕ್ಕಾಗಿ ಕೆಲಸ ಮಾಡುತ್ತಾರೆ, ನಾನು ದೇಶಕ್ಕಾಗಿ ಕೆಲಸ ಮಾಡುತ್ತೇನೆ ಎಂದರು.
ಕೇರಳದ ಕಾಂಗ್ರೆಸ್ ನಾಯಕರಾಗಿದ್ದ ಅನಿಲ್ ಆ್ಯಂಟನಿ ಅವರು 2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯ ಕುರಿತು ಬಿಬಿಸಿಯ ಸಾಕ್ಷ್ಯಚಿತ್ರದ ವಿವಾದದ ನಂತರ ಜನವರಿಯಲ್ಲಿ ಪಕ್ಷವನ್ನು ತೊರೆದಿದ್ದರು.