ಆಂಧ್ರಪ್ರದೇಶ, ಏ 07 (DaijiworldNews/HR): ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಮಾರ್ಚ್ 12ರಂದು ಕಾಂಗ್ರೆಸ್ ತೊರೆದು ಕೆಲವು ವಾರಗಳ ನಂತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಪಕ್ಷದ ನಾಯಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸಮ್ಮುಖದಲ್ಲಿ ಕಿರಣ್ ಕುಮಾರ್ ರೆಡ್ಡಿ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.