ತಿರುವನಂತಪುರ, ಏ 07 (DaijiworldNews/HR): ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಆರೋಪಿ ಶಾರುಖ್ ಸೈಫಿ(24) ಗಾಯಗೊಂಡಿರುವುದರಿಂದ ಆತನನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇನ್ನು ಇಂದು ಬೆಳಿಗ್ಗೆ ಆರೋಪಿ ಶಾರುಖ್ ಸೈಫಿಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಮತ್ತು ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಭಾನುವಾರ ತಡರಾತ್ರಿ ಕೇರಳದ ಕಣ್ಣೂರಿಗೆ ಹೊರಟಿದ್ದ ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಎರಡು ವರ್ಷದ ಮಗು ಸೇರಿದಂತೆ ಮೂವರು ಪ್ರಯಾಣಿಕರು ರೈಲ್ವೆ ಹಳಿಯಲ್ಲಿ ಸಾವನ್ನಪ್ಪಿ, ಎಂಟು ಮಂದಿಗೆ ಸುಟ್ಟ ಗಾಯಗಳಾಗಿತ್ತು.