ಲಖನೌ, ಏ 07 (DaijiworldNews/HR): ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿಲ್ಲ. ಕುಟುಂಬ ರಾಜಕಾರಣವು ಅಳಿವಿನ ಅಂಚಿಗೆ ತಲುಪಿದೆ ಹಾಗಾಗಿ ಪ್ರತಿಪಕ್ಷಗಳು ಇನ್ನಿಲ್ಲದ ಆರೋಪ ಮಾಡುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ, ಪ್ರತಿಪಕ್ಷಗಳ ನಾಯಕರಿಗೆ ಇ.ಡಿ, ಸಿಬಿಐಗಳನ್ನು ಗುರಾಣಿಯಾಗಿ ಬಳಕೆ, ವಿದೇಶದಲ್ಲಿ ನಿಂತು ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮಾರ್ಚ್ 6ರಂದು ಸಂಸತ್ ಅಧಿವೇಶನ ಅಂತ್ಯಗೊಂಡಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಯಾವುದೇ ಬಜೆಟ್ ಅಧಿವೇಶನವು ಚರ್ಚೆಯೇ ಇಲ್ಲದೆ ಮುಗಿದಿರಲಿಲ್ಲ. ಆದರೆ, ಪ್ರತಿಪಕ್ಷಗಳು ಸಂಸತ್ತಿನ ಕಲಾಪ ನಡೆಯಲು ಬಿಟ್ಟಿಲ್ಲ. ಇದಕ್ಕೆ ಕಾರಣ ಏನು ಗೊತ್ತಾ? ರಾಹುಲ್ ಗಾಂಧಿ ಲೋಕಸಭೆಯಿಂದ ಅನರ್ಹಗೊಂಡಿರುವುದೇ ಇದಕ್ಕೆ ಕಾರಣ ಎಂದಿದ್ದಾರೆ.