ನವದೆಹಲಿ, ಏ 8 (DaijiworldNews/HR): ಬೇಸಿಲಿನ ಬೇಗೆಗೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆ ಮುಂದಿನ ಐದು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್ಗಢದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ತಿಂಗಳ ಆರಂಭದಲ್ಲಿ ಹವಾಮಾನ ಇಲಾಖೆಯು ವಾಯುವ್ಯ ಮತ್ತು ಪರ್ಯಾಯ ದ್ವೀಪದ ಭಾಗಗಳನ್ನು ಹೊರತುಪಡಿಸಿ ದೇಶದ ಹಲವು ಭಾಗಗಳಲ್ಲಿ ಏಪ್ರಿಲ್ನಿಂದ ಜೂನ್ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಹೇಳಿತ್ತು.