ಬೆಂಗಳೂರು, ಏ 09 (DaijiworldNews/HR): ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದ ಬಳಿಕ ಈ ಸ್ಥಾನ ತೆರವಾಗಿದ್ದು, ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ.
ಇನ್ನು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಎನ್. ಚಂದ್ರಪ್ಪ ಅವರನ್ನು ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿ ಮಾಡುವಂತೆ ಎಐಸಿಸಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.