ಜಮ್ಮು ಮತ್ತು ಕಾಶ್ಮೀರ, ಏ 09 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಶಹಪುರ್ನಲ್ಲಿ ಭಾರತೀಯ ಸೇನೆ ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಏಪ್ರಿಲ್ 9 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಸೇನಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದರು. ಘಟನೆಯಲ್ಲಿ ಪಾಕಿಸ್ತಾನಿ ಮೂಲದ ವ್ಯಕ್ತಿಯನ್ನು ಸಾವನ್ನಪ್ಪಿದ್ದನು.
ಇನ್ನು ಮೂರು ಶಂಕಿತ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಶಹಪುರ್ ಸೆಕ್ಟರ್ನಲ್ಲಿ ಮುಂಜಾನೆ 2.15 ರ ಸುಮಾರಿಗೆ ವಿಫಲಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.