ಚಿಕ್ಕಮಗಳೂರು, ಏ 09 (DaijiworldNews/HR): ಕಾಂಗ್ರೆಸ್ನಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬೇಸರಗೊಂಡಿದ್ದ ವೈ.ಎಸ್.ವಿ ದತ್ತ ಅವರು ಇದೀಗ ಟವೆಲ್ ಗುರುತಿನ ಮೂಲಕ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ವೈ.ಎಸ್.ವಿ ದತ್ತ ಅವರು ಹೆಗಲ ಮೇಲೆ ಟವೆಲ್ ಹಾಕಿಕೊಂಡು ಮತ ಮತ್ತು ಚುನಾವಣೆ ಖರ್ಚಿಗಾಗಿ ಹಣ ನೀಡಿ ಎಂದು ಕ್ಷೇತ್ರದ ಜನರ ಬಳಿ ಭಿಕ್ಷೆ ಬೇಡಿದ್ದು, ಅಭಿಮಾನಿಗಳು 50 ಸಾವಿರ, ಲಕ್ಷ, 2 ಲಕ್ಷದ ಚೆಕ್ ನೀಡಿದ್ದಾರೆ. ಮತ್ತಷ್ಟು ಹಣವನ್ನು ಕೊಡುತ್ತೇವೆ ಅಂತಲೂ ಅಭಿಮಾನಿಗಳು ಹೇಳಿರುವುದಾಗಿ ವರದಿಯಾಗಿದೆ.
ಇನ್ನು ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಸ್ವತಂತ್ರವಾಗಿ ನಿಲ್ಲುವಂತೆ ಅಭಿಮಾನಿಗಳು ಸೂಚನೆ ನೀಡಿದ್ದು, ಅಭಿಮಾನಿಗಳ ಒತ್ತಾಯದ ಮೇರೆಗೆ ಸ್ವತಂತ್ರವಾಗಿ ಸ್ಪರ್ಧೆಗಿಳಿಯಲು ವೈ.ಎಸ್.ವಿ ದತ್ತ ಅವರು ನಿರ್ಧಾರ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.