ಹಾಸನ, ಏ.09 (DaijiworldNews/SM): ಭಾರೀ ಜನಸ್ತೋಮದ ಎದುರು ಜೆಡಿಎಸ್ ಮಾಜಿ ಶಾಸಕ ಕೆ.ಎಂ ಶಿವಲಿಂಗೇಗೌಡ ರವಿವಾರ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಜಿಲ್ಲೆಯ ಅರಸೀಕೆರೆ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಬಳಿಕ ಮಾತನಾಡಿದ ಕೆ.ಎಂ ಶಿವಲಿಂಗೇಗೌಡ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ನನಗೆ ಸಚಿವ ಸ್ಥಾನ ನೀಡಿ ಎಂದು ಪರೋಕ್ಷವಾಗಿ ಮನವಿ ಮಾಡಿದರು. ಸ್ವಾರ್ಥಕ್ಕಾಗಿ ಕಾಂಗ್ರೆಸ್ ಸೇರಿಲ್ಲ, ಕ್ಷೇತ್ರದ ಅಭಿವೃದ್ಧಿಗಾಗಿ ಸೇರಿದ್ದೇನೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ ಮಡಿಲಿಗೆ ಬಂದಿದ್ದೇನೆ. ಎತ್ತಿನಹೊಳೆ ಯೋಜನೆ ವ್ಯಾಪ್ತಿಗೆ ಅರಸೀಕೆರೆ ಸೇರಿಸಿದ್ದು ಸಿದ್ದರಾಮಯ್ಯ. ಕ್ಷೇತ್ರದ ಮನೆಮನೆಗೆ ನೀರು ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ಡಿ.ಕೆ ಸುರೇಶ್ರನ್ನು ನಂಬಿ ಪಕ್ಷಕ್ಕೆ ಬಂದಿದ್ದೇನೆ. ನನಗೂ 65 ವರ್ಷ ಆಗಿದೆ. ಹಾಲಲ್ಲಾದರು ಹಾಕಿ ನೀರಲ್ಲಾದ್ರು ಹಾಕಿ. ಆಗ ಪಕ್ಷದ ಮತಗಳು ಎಷ್ಟಿದ್ದವು, ಈಗ 95 ಸಾವಿರಕ್ಕೆ ಮುಟ್ಟಿಸಿದ್ದೇನೆ ಎಂದು ಜೆಡಿಎಸ್ ವಿರುದ್ದ ಗುಡುಗಿದರು. ಸಿದ್ದರಾಮಯ್ಯರನ್ನ ಹೊಗಳಿದ್ದೇ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ