ಹಾಸನ, ಏ 10 (DaijiworldNews/HR): ಬಿಜೆಪಿ ಸರ್ಕಾರವು ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ಅನ್ನು ಹೈಜಾಕ್ ಮಾಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾಸನದ ನಂದಿನಿ ಮಳಿಗೆಗೆ ಇಂದು ಭೇಟಿ ನೀಡಿ ಹಾಲಿನ ಉತ್ಪನ್ನಗಳನ್ನು ಖರೀದಿಸಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ಅನ್ನು ಹೈಜಾಕ್ ಮಾಡಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಆದರೆ ಬಿಜೆಪಿ ಸರ್ಕಾರಕ್ಕೆ ಇದು ನೆನಪಿರಲಿ ಕನ್ನಡಿಗರು ಎಂದಿಗೂ ತಮ್ಮ ಸ್ವಾಭಿಮಾನ ಮಾರಿಕೊಳ್ಳುವುದಿಲ್ಲ ಎಂದರು.
ಇನ್ನು ಕರ್ನಾಟಕದಲ್ಲಿ ನಂದಿನಿ VS ಅಮುಲ್ ವಿವಾದ ಸೃಷ್ಟಿಯಾಗಿದ್ದು, ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.