ಮುಂಬಯಿ, ಏ 11 (DaijiworldNews/HR): ಪೋಷಕರು ಮೊಬೈಲ್ ಕಸಿದುಕೊಂಡರೆಂಬ ಕ್ಷುಲಕ ಕಾರಣಕ್ಕೆ 15 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯ ಪಶ್ಚಿಮ ಉಪನಗರದ ಅಲ್ವಾನಿ ಪ್ರದೇಶದಲ್ಲಿ ನಡೆದಿದೆ.
ಬಾಲಕಿ ಹೆಚ್ಚು ಮೊಬೈಲ್ ಬಳಸುತ್ತಿದ್ದು, ಇದರಿಂದ ಬಾಲಕಿಗೆ ಪೋಷಕರು ಬುದ್ದಿಮಾತನ್ನು ಹೇಳಿದ್ದರು. ಆದರೂ ಬಾಲಕಿ ಇದನ್ನು ಕೇಳದ ಕಾರಣ ಪೋಷಕರು ಬಾಲಕಿಯಿಂದ ಮೊಬೈಲ್ ಕಸಿದುಕೊಂಡಿದ್ದಾರೆ ಇದೇ ಕಾರಣದಿಂದ ಬಾಲಕಿ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821