ಮಧ್ಯಪ್ರದೇಶ, ಏ 11 (DaijiworldNews/HR): ಎಸ್ಯುವಿ ಕಾರ್ಗೆ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಮಧ್ಯಪ್ರದೇಶದ ಇಂದೋರ್ನ ಶೆರಾಟನ್ ಗ್ಯಾಂಡ್ ಹೋಟೆಲ್ ಬಳಿ ನಡೆದಿದ್ದು, ಅದೃಷ್ಟವಶಾತ್ ಕಾರೊಳಗಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ಯಾರೇಜ್ ನಡೆಸುತ್ತಿರುವ ಇರ್ಷಾದ್ ಖಾನ್ ಮತ್ತು ಅವರ ಸಹೋದ್ಯೋಗಿ ಹಲೀಂ ಖಾನ್ ಅವರು ಮಹೀಂದ್ರ ಸ್ಕಾರ್ಪಿಯೊವನ್ನು ಟೆಸ್ಟ್ ಡ್ರೈವ್ ಮಾಡಲು ಹೊರಟಿದ್ದು, ಡ್ಯಾಶ್ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ, ಟೆಸ್ಟ್ ಡ್ರೈವ್ನಲ್ಲಿ ಕಾರಿನಿಂದ ಹೊಗೆ ಬರಲಾರಂಭಿಸಿತು. ಸ್ವಲ್ಪ ಹೊತ್ತಿನಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಇನ್ನು ಕಾರು ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿತ್ತು. ಇದೇ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನ ಮುಂಭಾಗದ ಬಾಗಿಲು ಸ್ವಯಂಚಾಲಿತವಾಗಿ ಲಾಕ್ ಆಗಿದ್ದು, ಇರ್ಷಾದ್ ಕಾರಿನ ಹಿಂಬದಿಯಿಂದ ಜಿಗಿದಿದ್ದಾನೆ. ಆದರೆ ಹೊತ್ತಿಕೊಳ್ಳುತ್ತಿದ್ದಂತೆ ಹಲೀಂ ಸಿಕ್ಕಿಬಿದ್ದಿದ್ದಾನೆ. ಆದರೆ ಆತ ಹಿಂದಿನ ಸೀಟಿಗೆ ಹೋಗಿ ಅಲ್ಲಿಂದ ತೆಗೆದು ಹೊರಗೆ ಬಂದಿದ್ದಾನೆ. ಇದಾದ ಬಳಿಕ ಕೆಲವೇ ನಿಮಿಷಗಳಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.