ನವದೆಹಲಿ, ಏ 11 (DaijiworldNews/HR): ಭಾರತದ ಸಂವಿಧಾನ ರಕ್ಷಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷವು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸಲಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಮೋದಿ ಸರ್ಕಾರವು ಎಲ್ಲ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಹಲವು ರಾಜ್ಯಗಳಲ್ಲಿ ಚುನಾವಣೆಗಳು ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸಂದೇಶವನ್ನು ನೇರವಾಗಿ ಜನರ ಬಳಿಗೇ ಕೊಂಡೊಯ್ಯಲಿದೆ ಎಂದರು.
ಇನ್ನು ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಹೆಚ್ಚುತ್ತಿರುವ ದ್ವೇಷ ಮತ್ತು ಹಿಂಸಾಚಾರವನ್ನು ಪ್ರಧಾನಿ ನಿರ್ಲಕ್ಷಿಸುತ್ತಿದ್ದು, ಒಮ್ಮೆಯೂ ಶಾಂತಿ ಅಥವಾ ಸೌಹಾರ್ದತೆಗಾಗಿ ಅವರು ಕರೆ ನೀಡಿಲ್ಲ. ಅಪರಾಧಿಗಳಿಗೆ ಶಿಕ್ಷೆಯಾಗಲು ಅವರು ಅವಕಾಶ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.