ಚಾಮರಾಜನಗರ, ಏ 11(DaijiworldNews/MS): "ನಾನು ವರುಣದಿಂದ ಸ್ಪರ್ಧೆ ಮಾಡಲ್ಲ" ಎಂದು ವಸತಿ ಇಲಾಖೆ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, "ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ವಿಚಾರವಾಗಿ ಕೇಂದ್ರ ನಾಯಕರ ವಲಯದಲ್ಲಿ ಚರ್ಚೆ ಆಗಿರುವುದು ನಿಜ. ಆದರೆ ವರುಣದಿಂದ ಸ್ಪರ್ಧೆ ಮಾಡಲ್ಲ ಎಂದು ವರಿಷ್ಠರಿಗೆ ತಿಳಿಸಿದ್ದೇನೆ" ಎಂದು ಸೋಮಣ್ಣ ಹೇಳಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಪ್ರಬಲ ಪೈಪೋಟಿ ನೀಡಲು, ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದ್ದುಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎನ್ನಲಾಗಿತ್ತು. ಆದರೆ ಇದೀಗ ವರುಣಾದಲ್ಲಿ ತಾವು ಸ್ಪರ್ಧಿಸುತ್ತಿಲ್ಲ ಎಂಬುವುದನ್ನು ಸೋಮಣ್ಣ ಅವರೇ ಸ್ಪಷ್ಟಪಡಿಸಿದ್ದಾರೆ.