ಹುಬ್ಬಳ್ಳಿ, ಏ 11(DaijiworldNews/MS): ನಾನು ರಾಜಕಾರಣದಿಂದ ಹಿಂದೆ ಸರಿಯುವ ಮಾತಿಲ್ಲ. ಇನ್ನೂ ಹತ್ತು- ಹದಿನೈದು ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸುತ್ತೇನೆ, ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತೇನೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
"ಪಕ್ಷದ ವರಿಷ್ಠರಿಂದ ದೂರವಾಣಿ ಕರೆ ಬಂದ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿದ ಅವರು, ಪಕ್ಷದ ವರಿಷ್ಠರಿಂದ ಬೆಳಗ್ಗೆ ಫೋನ್ ಬಂದಿತ್ತು, ನೀವು ಹಿರಿಯರು, ಹೊಸಬರಿಗೆ ಮಾಡಿಕೊಡಲು ಒಪ್ಪುತ್ತೀರಾ ಎಂದು ಕೇಳಿದರು,ನಾನು ಮೂವತ್ತು ವರ್ಷಗಳಿಂದ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಆರು ಸಾರಿ ಸ್ಪರ್ಧಿಸಿ ಗೆದ್ದು ಬಂದಿದ್ದೇನೆ. ನನಗೆ ಟಿಕೆಟ್ ನಿರಾಕರಿಸಲು ಕಾರಣ ತಿಳಿಸುವಂತೆ ಕೇಳಿದ್ದೇನೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ನಾನು ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ. ಪಕ್ಷದ ವರಿಷ್ಠರ ಬಗ್ಗೆ ವಿಶ್ವಾಸವಿದೆ ನಾಳೆವರೆಗೂ ಕಾಯ್ದು ನೋಡುತ್ತೇನೆ. ನಂತರ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದಾರೆ.