ಬೆಂಗಳೂರು, ಏ12 (DaijiworldNews/MS): ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ" ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಮಗಳು ಕೆಲಸ ಮಾಡಬಾರದಿತ್ತುಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ಯೋಚಿಸಿರಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ಕುತಂತ್ರ ಇರಬಹುದು ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆ ಸಂತೋಷ, ನೆಮ್ಮದಿ ನನಗಿದೆ. ಏನಾದರೂ ನಾನು ಕಾಂಗ್ರೆಸ್ ತೊರೆಯುವುದಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಲ್ಲುತ್ತೇನೆ ಎಂದು ಕಾಗೋಡು ಸ್ಪಷ್ಟಪಡಿಸಿದ್ದಾರೆ.
ವಯಸ್ಸಿನ ಕಾರಣದಿಂದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರೆ ಕಾಗೋಡು ತಿಮ್ಮಪ್ಪ ಪುತ್ರಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದರು. ಆದರೆ ಇವರಿಬ್ಬರ ಬದಲು ಕಾಂಗ್ರೆಸ್ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದೆ.