ಮೂಡುಗೆರೆ, ಏ 13(DaijiworldNews/MS): ಬಿಜೆಪಿಯ 2ನೇ ಅಭ್ಯರ್ಥಿಗಳ ಲಿಸ್ಟ್ ಬಿಡುಗಡೆ ಮಾಡುತ್ತಿದ್ದಂತೆ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮೀಸಲು ಕ್ಷೇತ್ರಕ್ಕೆ ಕುಮಾರಸ್ವಾಮಿ ಅವರನ್ನು ಕೈಬಿಟ್ಟು ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿಗೆ ರಾಜೀನಾಮೆ ನೀಡಿ ಅವರು ಜೆಡಿಎಸ್ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದೂ ತಿಳಿದುಬಂದಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಎಂ.ಪಿ. ಕುಮಾರಸ್ವಾಮಿ ತನಗೆ ಟಿಕೆಟ್ ಸಿಗದಿರಲು ಅವರೇ ಕಾರಣ ಎಂದು ಆರೋ್ಪಿಸಿದ್ದಾರೆ.