ಬೆಂಗಳೂರು, ಏ 14 (DaijiworldNews/MS): ವಿವಾದಾತ್ಮಕ ಮಾತು, ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ನಟ ಚೇತನ್, ಹಿಮಾಚಲ ಮುಖ್ಯಮಂತ್ರಿ ಸುಖು ಗಾಂಜಾ ವಿಚಾರವಾಗಿ ಮಾತನಾಡಿದ್ದನ್ನು ಅನುಮೋದಿಸುವ ಮೂಲಕ 'ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ' ಎಂದು ನಟ ಚೇತನ್ ಎಂದು ಹೇಳಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡ ಅವರು, ಹಿಮಾಚಲದ ಮುಖ್ಯಮಂತ್ರಿಯ ನಡೆಯು ಒಳ್ಳೆಯದು ಕರ್ನಾಟಕವೂ ಇದರತ್ತ ಗಮನ ಹರಿಸುವ ಮೂಲಕ ಗಾಂಜಾ ಕೃಷಿಯು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಮತ್ತು ರೋಗಿಗಳಿಗೆ ಔಷಧೀಯ ಪ್ರಯೋಜನಗಳನ್ನು ಹೇಗೆ ಒದಗಿಸುತ್ತದೆ ಎಂಬುದನ್ನು 5 ಸದಸ್ಯ ಸಮಿತಿಯೊಂದು ಅಧ್ಯಯನ ಮಾಡುತ್ತದೆ.
ಉತ್ತರಾಖಂಡ, ಗುಜರಾತ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಕರ್ನಾಟಕವೂ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವತ್ತ ಗಮನಹರಿಸಬೇಕು' ಎನ್ನುವ ಮೂಲಕ ಹಿಮಾಚಲ ಮುಖ್ಯಮಂತ್ರಿ ಸುಖು ಗಾಂಜಾ ವಿಚಾರವನ್ನು ಶ್ಲಾಘನೆ ಮಾಡಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.