ಬೆಳಗಾವಿ, ಏ 14 (DaijiworldNews/HR): "ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಆಹ್ವಾನವಿದೆ, ಈ ಬಗ್ಗೆ ಸಂಜೆ ತೀರ್ಮಾನಕ್ಕೆ ಬರುತ್ತೇನೆ" ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿಧಾನ ಪರಿಷತ್ ಸ್ಥಾನ ಪಕ್ಷಕ್ಕೆ ರಾಜೀನಾಮೆ ಕೊಡಬೇಕು. ಇನ್ನೂ ಹಂಗಿನಲ್ಲಿ ಇದ್ದೇನೆ, ಅದರಿಂದ ಹೊರಬರಬೇಕು. ಬಳಿಕ ಏನು ಮಾಡಬೇಕೆಂಬ ತೀರ್ಮಾನ ಮಾಡುತ್ತೇನೆ" ಎಂದರು.
ಇನ್ನು ಬೆಂಗಳೂರಿಗೆ ಹೋಗಿ ಸಾಧಕ, ಬಾಧಕ ಚರ್ಚೆ ಮಾಡುತ್ತೇನೆ. ಬಳಿಕ ಒಂದು ನಿರ್ಣಯ ಮಾಡುತ್ತೇನೆ. ಏಪ್ರಿಲ್ 17 ಇಲ್ಲವೇ 18 ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಕ್ಷೇತ್ರದ ಜನರ ಒಪ್ಪಿಗೆ ಪಡೆದಿದ್ದೇನೆ. ಖಾಸಗಿಯಾಗೂ ಅನೇಕರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ ಎಂದಿದ್ದಾರೆ.
ಮನೆ ಬಿಟ್ಟು ಹೊರಗೆ ಬಂದ ಮೇಲೆ ಸಂಪರ್ಕ ಮಾಡಿದರೇನು, ಬಿಟ್ಟರೇನು. ನನ್ನ ಸಂಪರ್ಕಕ್ಕೆ ಬಿ ಎಲ್ ಸಂತೋಷ ಬಹಳ ಪ್ರಯತ್ನ ಪಟ್ಟರು. ಕೆಲ ಮುಖಂಡರನ್ನು ಸಹ ಕಳಸಿದರು. ಆಜ್ಞೆಯನ್ನು ಪಾಲಿಸುವುದು ಕಷ್ಟ, ಬಿಡುವುದು ಕಷ್ಟ ಸಂತೋಷ ಅವರು ನನ್ನ ಗುರು, ನನ್ನನ್ನು ಕ್ಷಮಿಸಿ ಎಂದು ಹೇಳುತ್ತೇನೆ ಎಂದರು.